(ನ್ಯೂಸ್ ಕಡಬ) newskadaba.com, ಅ..24: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ವಾಹನ ಚಾರ್ಮಾಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.












