ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ



(ನ್ಯೂಸ್ಕಡಬ) newskadaba.com,  ..29: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.





ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.






ಈ ಡೈವಿಂಗ್ ಕ್ಯಾಚ್ ಹಿಡಿಯುವ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವ ಉಂಟಾಗಿ, ಅವರು ಅಸ್ವಸ್ಥರಾಗಿದ್ದರು.

ಸ್ಕ್ಯಾನಿಂಗ್ ಬಳಿಕ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ತಿಳಿದುಬಂದಿದ್ದು, ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಶಸ್ತ್ರಚಿಕಿತ್ಸೆ ಬಳಿಕ ಶ್ರೇಯಸ್ ಅಯ್ಯರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅಲ್ಲದೆ ಇದೀಗ ಅವರನ್ನು ಐಸಿಯುನಿಂದ ವಾರ್ಡ್​​ಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಪ್ತರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ನಡೆಸಿರುವುದರಿಂದ ಅಯ್ಯರ್ ಅವರಿಗೆ ಕನಿಷ್ಠ ಐದು ದಿನಗಳು, ಬಹುಶಃ ಒಂದು ವಾರದವರೆಗೆ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಸದ್ಯ ಶ್ರೇಯಸ್ ಅಯ್ಯರ್ ಅವರು ಸಿಡ್ನಿ ವೈದ್ಯರು ಹಾಗೂ ಭಾರತೀಯ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಶ್ರೇಯಸ್ ಅಯ್ಯರ್ ಶೀಘ್ರದಲ್ಲೇ ಗುಣಮುಖರಾಗಿ ಭಾರತಕ್ಕೆ ಮರಳುವ ನಿರೀಕ್ಷೆಯಿದೆ.

 

error: Content is protected !!
Scroll to Top