ಇಂದಿನ ಹವಾಮಾನ ವರದಿ



(ನ್ಯೂಸ್ಕಡಬ) newskadaba.com,  ..30: ರಾಜ್ಯದಲ್ಲಿ ಅ.30ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27°C ಮತ್ತು 19°C ಇರುವ ಸಾಧ್ಯತೆ ಇದೆ.






 

error: Content is protected !!
Scroll to Top