ಬೆಂಗಳೂರು: “ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ” : ಸಭಾಪತಿ ಬಸವರಾಜ ಹೊರಟ್ಟಿ



(ನ್ಯೂಸ್ಕಡಬ) newskadaba.com,  .30 ಬೆಂಗಳೂರು:  ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು 35ಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ.
33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು.





ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ ಹಿಂದಿದ್ದ ನಿಯಮವೇ ಉತ್ತಮ ಎಂದು ಅವರು ಹೇಳಿದ್ದಾರೆ. ಜೊತೆಗೆ, ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹ್ದುೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.






ಬಂಗಾರಪ್ಪ ಅವರ ನಿರ್ಧಾರ ದುರದೃಷ್ಟಕರ.ಸ್ಪರ್ಧಾತಕ ಜಗತ್ತಿನಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆಗಳನ್ನು ಎದುರಿಸುವುದು ಮುಖ್ಯ. ಅಂಕಗಳನ್ನು ಗಳಿಸುವುದು ಪರೀಕ್ಷೆಗಳ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದ್ದರೂ, ಇದು ವಿದ್ಯಾರ್ಥಿಯು ತನ್ನ ಗಮನ, ಧೈರ್ಯ, ಸರಣಶಕ್ತಿ, ಕಲಿಕಾ ಸಾಮರ್ಥ್ಯ ಮತ್ತು ಇತರ ಸಮಗ್ರ ಬೆಳವಣಿಗೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.ವಿದ್ಯಾರ್ಥಿಯ ಪ್ರತಿಭೆಯನ್ನು ಹೊರತರಲು ಸಹಾಯ ಮಾಡುತ್ತದೆ. ಇದು ಅವರ ಭವಿಷ್ಯಕ್ಕೆ ಸಹಾಯ ಮಾಡುತ್ತದೆ. ಈ ನಿಟ್ಟಿನಲ್ಲಿ, 35 ಅಂಕಗಳನ್ನು ಬಹಳ ಹಿಂದಿನಿಂದಲೂ ನಿಗದಿಪಡಿಸಲಾಗಿದೆ. ಇದು ವೈಜ್ಞಾನಿಕ ಮಾನದಂಡವಾಗಿದೆ. ಅದನ್ನು 33 ಅಂಕಗಳಿಗೆ ಇಳಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

error: Content is protected !!
Scroll to Top