(ನ್ಯೂಸ್ ಕಡಬ) newskadaba.com, ನ.01 ನವದೆಹಲಿ: ನವೆಂಬರ್ ತಿಂಗಳ ಮೊದಲ ದಿನವೇ ದೇಶದ ಜನತೆಗೆ ಗುಡ್ನ್ಯೂಸ್ ಸಿಕ್ಕಿದ್ದು, ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳ ಅಧಿಸೂಚನೆಯ ಪ್ರಕಾರ, 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ನವೆಂಬರ್ 1 ರಿಂದ ರೂ. 4.5 ರಿಂದ ರೂ. 6.5 ವರೆಗೆ ಇಳಿಸಲಾಗಿದೆ. ಗೃಹ ಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಈ ತಿಂಗಳು ಯಾವುದೇ ಬದಲಾವಣೆ ಆಗಿಲ್ಲ. ಈ ಬೆಲೆಗಳು ಏಪ್ರಿಲ್ 2025 ರಿಂದ ಸ್ಥಿರವಾಗಿಯೇ ಇವೆ.
19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ
ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಬೆಲೆ: ನವೆಂಬರ್ 1, 2025 ರಿಂದ, 19 ಕೆಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆ ರೂ. 5 ಇಳಿಕೆಯಾಗಿದ್ದು, ಸಿಲಿಂಡರ್ ದರ 1,590.5ರಷ್ಟಿದೆ. ಈ ಹಿಂದೆ ಪ್ರತಿ ಸಿಲಿಂಡರ್ಗೆ ರೂ. 1,595.5 ರಷ್ಟಿತ್ತು.
ಕೋಲ್ಕತ್ತಾದಲ್ಲಿ ವಾಣಿಜ್ಯ ಎಲ್ಪಿಜಿ ಬೆಲೆ: ನವೆಂಬರ್ 1 ರಿಂದ, 19 ಕೆಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆ ರೂ. 6.5 ಇಳಿಕೆಯಾಗಿದ್ದು, ಸಿಲಿಂಡರ್ ದರ. 1,694 ರಷ್ಟಿದೆ. ಅಕ್ಟೋಬರ್ನಲ್ಲಿ ಪ್ರತಿ ಸಿಲಿಂಡರ್ಗೆ ರೂ. 1,700.5 ರಷ್ಟಿತ್ತು.










