ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್



(ನ್ಯೂಸ್ಕಡಬ) newskadaba.com,  ..01: ಪೊಲೀಸ್‌‍ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾ ಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಯಾವ ರೀತಿ ಲಂಚ ವಸೂಲಿ ಮಾಡಲಾಯಿತು ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಸುಧೀರ್ಘವಾಗಿ ಬರೆದುಕೊಂಡಿದ್ದರು.





ಇದಕ್ಕೆ ಸಂಬಂಧಪಟ್ಟಂತೆ ಬೆಳಂದೂರು ಪೊಲೀಸ್‌‍ಠಾಣೆಯ ಸಬ್‌ ಇನ್‌್ಸಪೆಕ್ಟರ್‌ ಮತ್ತು ಕಾನ್‌ಸ್ಟೆಬಲ್‌ ಅವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವ ಪರಮೇಶ್ವರ್‌, ಪೊಲೀಸ್‌‍ ಇಲಾಖೆ ಮಾತ್ರವಲ್ಲದೆ ಸರ್ಕಾರದ ಯಾವುದೇ ಇಲಾಖೆಯಲ್ಲಾದರೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿದ್ದರೆ ಅದನ್ನು ಸಹಿಸುವುದಿಲ್ಲ. ಕಠಿಣಕ್ರಮ ಕೈಗೊಳ್ಳುತ್ತೇವೆ ಎಂದರು.






error: Content is protected !!
Scroll to Top