ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್



(ನ್ಯೂಸ್ಕಡಬ) newskadaba.com,  .03: ಪಾಕಿಸ್ತಾನ, ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.





ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದ್ರೆ ಯಾರೂ ಅದರ ಬಗ್ಗೆ ಮಾತನಾಡ್ತಿಲ್ಲ. ಆದ್ರೆ ನಮ್ಮದು ಮುಕ್ತ ಸಮಾಜ, ಎಲ್ಲವನ್ನೂ ಮಾತನಾಡ್ತೀವಿ. ಇಲ್ಲದಿದ್ರೆ ನೀವು ನಾಳೆ ಹೇಳಿದ್ದನ್ನೂ ಮೀರಿ ವರದಿ ಮಾಡ್ತೀರಿ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.






ಮುಂದುವರೆದು, “ಅವರೆಲ್ಲರೂ ನ್ಯೂಕ್ಲಿಯರ್ ಪರೀಕ್ಷೆ ನಡೆಸುತ್ತಿದ್ದಾರೆ. ಆದ್ರೆ ಇತರ ಎಲ್ಲಾ ದೇಶಗಳಿಗಿಂತ ಅಮೆರಿಕ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನ ಹೊಂದಿದೆ. ಇಡೀ ಜಗತ್ತನ್ನು 150 ಬಾರಿ ಸ್ಫೋಟಿಸುವಷ್ಟು ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳನ್ನು ನಾವು ಹೊಂದಿದ್ದೇವೆ. ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಇಬ್ಬರೊಂದಿಗೂ ಈ ವಿಷಯ ಚರ್ಚಿಸಿದ್ದೇನೆ. ಆದಾಗ್ಯೂ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಪರಿಸ್ಥಿತಿ ಅನುಗುಣವಾಗಿ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ” ಎಂದಿದ್ದಾರೆ.

error: Content is protected !!
Scroll to Top