ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ



(ನ್ಯೂಸ್ಕಡಬ) newskadaba.com,  .03: ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಿನ ಎರಡನೇ, ನಾಲ್ಕು ದಿನಗಳ ಟೆಸ್ಟ್‌ ಪಂದ್ಯದಲ್ಲಿ ಭಾಗವಹಿಸುವ ಉದ್ದೇಶದಿಂದ ಕುಲ್ದೀಪ್ ಯಾದವ್ ಅವರನ್ನು ಉಳಿದ ಆಸ್ಟ್ರೇಲಿಯಾ ಸರಣಿಯ ಭಾರತ(AUS vs IND) ತಂಡದಿಂದ ಬಿಡುಗಡೆ ಮಾಡಲಾಗಿದೆ.





ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯ ಗುರುವಾರ, ನವೆಂಬರ್ 6 ರಂದು ಆರಂಭವಾಗಲಿದೆ. ತನುಷ್ ಕೋಟ್ಯಾನ್ ಅವರ ಎಂಟು ವಿಕೆಟ್ ಗೊಂಚಲಿನ ನೆರವಿನಿಂದ ಭಾರತ ಎ ತಂಡವು ಸಿಒಇಯಲ್ಲಿ ನಡೆದ ಮೊದಲ ಪಂದ್ಯವನ್ನು ಮೂರು ವಿಕೆಟ್‌ಗಳಿಂದ ಗೆದ್ದುಕೊಂಡಿತು.






ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಿದ್ದು, ಕುಲ್ದೀಪ್ ಅವರಿಗೆ ಕೆಂಪು ಚೆಂಡಿನ ಅಭ್ಯಾಸ ನಡೆಸುವ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಆಸ್ಟ್ರೇಲಿಯಾ ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಆಡುವ ಹನ್ನೊಂದರ ತಂಡದಲ್ಲಿಲ್ಲದ ಕುಲ್ದೀಪ್, ಸಿಡ್ನಿಯಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಅವಕಾಶ ಪಡೆದಿದ್ದರು. ಆದರೆ ನಿರೀಕ್ಷಿತ ಬೌಲಿಂಗ್‌ ನಡೆಸಲು ವಿಫಲರಾಗಿದ್ದರು.10 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಮಾತ್ರ ಕಿತ್ತಿದ್ದರು. ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಆಡಿದ್ದರು. ಅಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಮೂರನೇ ಪಂದ್ಯದಿಂದ ಕೈಬಿಡಲಾಗಿತ್ತು.

error: Content is protected !!
Scroll to Top