(ನ್ಯೂಸ್ ಕಡಬ) newskadaba.com, ಅ.05: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ (Pavithra Gowda) ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ.












