(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.01. ಪ್ರಸ್ತುತ ನೆಟ್ಲಮುಡ್ನೂರು – ಪುತ್ತೂರು ಮಾರ್ಗದಲ್ಲಿರುವ ಕರಾಯ ವಿದ್ಯುತ್ ಕೇಂದ್ರದ ಹೊರೆಯನ್ನು ಪ್ರತ್ಯೇಕಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಮೇ 02 ಬುಧವಾರ ಹಾಗೂ ಮೇ 05 ಶನಿವಾರದಂದು ಬೆಳಿಗ್ಗೆ 08 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಮೆಸ್ಕಾಂ ತಿಳಿಸಿದೆ.
ಆದುದರಿಂದ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ 110/33/11 ಕೆವಿ ಪುತ್ತೂರು ಹಾಗೂ 33/11 ಕೆವಿ ಕ್ಯಾಂಪ್ಕೋ, ಕುಂಬ್ರ, ಬೆಳ್ಳಾರೆ, ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತಗೊಳ್ಳಲಿದ್ದು, ಬಳಕೆದಾರರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.










