(ನ್ಯೂಸ್ ಕಡಬ) newskadaba.com, ನ.05: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2, 2026ರ ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ.
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ












