ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ



(ನ್ಯೂಸ್‌ ಕಡಬ) newskadaba.com,  ನ.05:  ಮುಂದಿನ ಎರಡು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ.





ನ.6ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.






ನ.7ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

error: Content is protected !!
Scroll to Top