ರಾಜ್ಯದ ಪಂಚ ಗ್ಯಾರಂಟಿಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹10,000 ಪ್ರಯೋಜನ



(ನ್ಯೂಸ್ಕಡಬ) newskadaba.com,  ನ.06 ಬೆಂಗಳೂರು:  ‘ರಾಜ್ಯದಲ್ಲಿ ಪಂಚ ಗ್ಯಾರಂಟಿಗಳಿಂದ ನಾಲ್ಕು ಜನರ ಕುಟುಂಬ ಕನಿಷ್ಠ ಸರಾಸರಿ ತಿಂಗಳಿಗೆ 10 ಸಾವಿರ ರು. ಪ್ರಯೋಜನ ಪಡೆಯುತ್ತಿದೆ.





ತನ್ಮೂಲಕ ಕರ್ನಾಟಕ ಗ್ಯಾರಂಟಿ ಮಾದರಿ ಸಾಮಾಜಿಕ, ಆರ್ಥಿಕ ಕ್ರಾಂತಿಗೆ ಕಾರಣವಾಗಿದ್ದು, ಇದನ್ನು ರಾಷ್ಟ್ರೀಯ ಮಾದರಿಯಾಗಿ ಗುರುತಿಸಿ ಎಲ್ಲಾ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಆರ್ಥಿಕ ಬೆಂಬಲ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.






ಕೇಂದ್ರ ಸರ್ಕಾರ ರಾಜ್ಯದ ಗ್ಯಾರಂಟಿ ಮಾದರಿಯನ್ನು ಗುರುತಿಸಿ ರಾಜ್ಯಗಳಿಗೆ ಹೆಚ್ಚುವರಿ ಹಾಗೂ ನ್ಯಾಯಬದ್ಧ ಆರ್ಥಿಕ ಬೆಂಬಲ ನೀಡಬೇಕು. ತನ್ಮೂಲಕ ರಾಜ್ಯಗಳು ತನ್ನ ಜನರ ಮೇಲೆ ಹೂಡಿಕೆಗೆ ನೆರವಾಗಬೇಕು ಎಂದೂ ಅವರು ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಬುಧವಾರ ವಿತ್ತೀಯ ಕಾರ್ಯನೀತಿ ಸಂಸ್ಥೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಭಾಷಣವನ್ನು ಅವರ ಅನುಪಸ್ಥಿತಿಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಓದಿದರು.

 

error: Content is protected !!
Scroll to Top