ಆಸ್ಟ್ರೇಲಿಯಾ ಎದುರು ಟಾಸ್ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್!



(ನ್ಯೂಸ್‌ ಕಡಬ) newskadaba.com,  ನ.06:   ಇಲ್ಲಿನ ಕ್ಯಾರೆರಾ ಓವಲ್‌ ಕ್ರೀಡಾಂಗಣದಲ್ಲಿನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ(IND vs AUS) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್‌ ಮಾರ್ಷ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಭಾರತ ತಂಡವನ್ನು (India) ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಲಾಗಿದೆ. ಆ ಮೂಲಕ ಪ್ರವಾಸಿ ತಂಡವನ್ನು ಕಡಿಮೆ ಮೊತ್ತಕ್ಕೆ ಆಲ್‌ಔಟ್‌ ಮಾಡಲು ಆತಿಥೇಯ ತಂಡದ ನಾಯಕ ಯೋಜನೆ ರೂಪಿಸಿದ್ದಾರೆ.





ಭಾರತ ತಂಡದ ಪ್ಲೇಯಿಂಗ್‌ XI ನಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಟಾಸ್‌ ವೇಳೆ ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ತಿಳಿಸಿದ್ದಾರೆ. ಮೂರನೇ ಪಂದ್ಯವನ್ನು ಆಡಿದ್ದ ಅದೇ ಆಡುವ ಬಳಗವನ್ನು ಈ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಇನ್ನುಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್‌ XIನಲ್ಲಿ ನಾಲ್ಕು ಬದಲಾವಣೆಯನ್ನು ತರಲಾಗಿದೆ ಎಂದು ಮಿಚೆಲ್‌ ಮಾರ್ಷ್‌ ಮಾಹಿತಿ ನೀಡಿದ್ದಾರೆ.






error: Content is protected !!
Scroll to Top