(ನ್ಯೂಸ್ ಕಡಬ) newskadaba.com ಕಡಬ, ನ.06. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿವಾಸಿ 14 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕ ಶಾಲೆಯಿಂದ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.








