ಗಾಂಜಾ ಸಾಗಾಟ: ಆರೋಪಿ ಬಂಧನ



(ನ್ಯೂಸ್‌ ಕಡಬ) newskadaba.com,  ನ.08: ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ರಿಕ್ಷಾ ಚಲಾಯಿಸುತ್ತಿದ್ದ ಪ್ರಸಾದ್ ಬಂಧಿತ ಆರೋಪಿ.
ಈತ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಅರಿತ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿ ಸಹಿತ ಆತನಿಂದ ಸುಮಾರು ಒಂದು ಕೆಜಿಗಿಂತಲೂ ಅಧಿಕ ಗಾಂಜಾ ಹಾಗೂ ತಲವಾರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಯನ್ನು ದಸ್ತಗಿರಿ ಮಾಡಿರುವ ಪೊಲೀಸರು ವಿಚಾರಣೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.





error: Content is protected !!
Scroll to Top