ರಾಜ್ಯದಲ್ಲಿ ಮುಂದಿನ ಮೂರು ದಿನ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ



(ನ್ಯೂಸ್ ಕಡಬ) newskadaba.com,  .14:   ರಾಜ್ಯದಲ್ಲಿ ಗುರುವಾರ ಎಲ್ಲೆಡೆ ಒಣ ಹವೆ ಕಂಡುಬಂದಿತ್ತು. ಅದೇ ರೀತಿ ಮುಂದಿನ ಮೂರು ದಿನ ಕರ್ನಾಟಕದಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು  ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರಬಹುದು.





ನ.14ರಿಂದ 16ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ನ.17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.






ನ.18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

error: Content is protected !!
Scroll to Top