(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ಪಶ್ಚಿಮ ವಲಯದಲ್ಲಿ ಕಳೆದ ಕೆಲವು ಸಮಯಗಳಿಂದ ಕರ್ತವ್ಯದಲ್ಲಿದ್ದ ಮೂವರು ಉಪ ನಿರೀಕ್ಷಕರನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿಯವರು ಆದೇಶಿಸಿದ್ದಾರೆ.
ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ ಅಭಿನಂದನ್ ಎಂ.ಎಸ್. ರವರನ್ನು ವರ್ಗಾವಣೆಗೊಳಿಸಲಾಗಿದ್ದು, ಕಡಬ ಠಾಣೆಯ ನೂತನ ಎಸ್ಐ ಆಗಿ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಜಂಬೂರಾಜ್ ಮಹಾಜನ್ ರನ್ನು ನಿಯೋಜಿಸಲಾಗಿದೆ. ಬಂಟ್ವಾಳ ಠಾಣೆಯ ಗುಣಪಾಲ ಜೆ. ಯವರನ್ನು ಪುತ್ತೂರು ಗ್ರಾಮಾಂತರ ಠಾಣಾ ಎಸ್ಐ ಆಗಿ ವರ್ಗಾಯಿಸಲಾಗಿದೆ.












