(ನ್ಯೂಸ್ ಕಡಬ) newskadaba.com, ನ.15: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ ನೋಡುವ ಮೂಲಕ ಚಿತ್ರತಂಡವನ್ನು ಪ್ರೋತ್ಸಾಹಿಸಬೇಕು” ಎಂದರು.
ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, “ತುಳು ಸಿನಿಮಾಗಳಿಗೆ ಇಂದು ನಿರ್ದಿಷ್ಟ ಥಿಯೇಟರ್ ಗಳಿವೆ. ಹೀಗಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ ನಿರ್ಮಾಪಕರು ಗೆಲ್ಲಬೇಕಾದರೆ ತುಳುವರು ಥಿಯೇಟರ್ ಗಳಿಗೆ ಹೋಗಿ ಸಿನಿಮಾ ನೋಡಬೇಕು. ಜೈ ಸಿನಿಮಾ ಜನರ ನಿರೀಕ್ಷೆ ಹೆಚ್ಚಿಸಿದ್ದು ಸಿನಿಮಾ ಗೆಲ್ಲಲಿ” ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ನಟ ನಿರ್ದೇಶಕ ರೂಪೇಶ್ ಶೆಟ್ಟಿ, ಬಿಗ್ ಸಿನೆಮಾಸ್ ನ ಬಾಲಕೃಷ್ಣ ಶೆಟ್ಟಿ, ಭೋಜರಾಜ್ ವಾಮಂಜೂರ್, ಬಾಳ ಜಗನ್ನಾಥ ಶೆಟ್ಟಿ, ನಾಯಕಿ ಅದ್ವಿತಿ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ತಮ್ಮ ಲಕ್ಷ್ಮಣ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ಸಚಿನ್ ಉಪ್ಪಿನಂಗಡಿ, ನವೀನ್ ಶೆಟ್ಟಿ, ಪ್ರೇಮ್ ಶೆಟ್ಟಿ, ಶೋಭಾ ಶೆಟ್ಟಿ, ಸುಜಾತ ಶಕ್ತಿನಗರ, ಜಯಶೀಲ ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.








