(ನ್ಯೂಸ್ ಕಡಬ) newskadaba.com ಕಡಬ, ನ.17. ದೂಪದ ಮರವೊಂದು ಮುರಿದು ರಸ್ತೆಗೆ ಬಿದ್ದ ಘಟನೆ ಕಡಬ ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ಸೋಮವಾರ ಸಂಜೆ ನಡೆದಿದ್ದು, ಬೈಕ್ ಸವಾರ ಮತ್ತು ಬಸ್ಸೊಂದು ಕೂದಳೆಲೆಯ ಅಂತರದಲ್ಲಿ ಪಾರಾದ ಘಟನೆ ಸಂಭವಿಸಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಮರ ಬೀಳುವ ದೃಶ್ಯ ಸೆರೆಯಾಗಿದ್ದು, ಬೈಕ್ ಸವಾರ ಅದೃಷ್ಟವಶಾತ್ ಕೂದಳೆಲೆಯ ಅಂತರದಲ್ಲಿ ಪಾರಾಗಿರುವುದು ಕಂಡುಬಂದಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇದೇ ಪರಿಸರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮರ ಬಿದ್ದು ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದರು. ಅಪಾಯಕಾರಿ ಹಾಲು ಮಡ್ಡಿ ಮರಗಳನ್ನು ತೆರವುಗೊಳಿಸಲು ಅರಣ್ಯಾಧಿಕಾರಿಗಳು ಮುಂದಾಗದೇ ಇದ್ದುದರಿಂದ ಇಂತಹ ಅನಾಹುತಗಳು ಪುನರಾವರ್ತಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












