(ನ್ಯೂಸ್ ಕಡಬ) newskadaba.com, ನ.18 ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆ ಸೇರಿ ಒಟ್ಟು 224 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರು ಜಲಮಂಡಳಿಯ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು. ಈ ಬಗ್ಗೆ ನ.15ರಂದು ಕೆಇಎ ಅಧಿಸೂಚನೆ ಹೊರಡಿಸಿದೆ.
ನೇಮಕಾತಿ ವಿವರ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ನವೆಂಬರ್ 17
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 25
ಶುಲ್ಕ ಪಾವತಿಗೆ ಕೊನೆಯ ದಿನಾಂಕ: ನವೆಂಬರ್ 26












