(ನ್ಯೂಸ್ ಕಡಬ) newskadaba.com, ನ.19 ಮೈಸೂರು: ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಹೋಗಲಾಡಿಸಿ ಬಾಲ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಕಾರ್ಮಿಕ ಇಲಾಖೆ ಆಯುಕ್ತರು ದೇಣಿಗೆ ಸಂಗ್ರಹಿಸಲು ಸೂಚನೆ ನೀಡಿದ್ದು, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಪ್ರತ್ಯೇಕ ಖಾತೆ ತೆರೆದು ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ.ಜಿ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿ, ಕಾರ್ಯಪಡೆ ಹಾಗೂ ಸರ್ವ ಸದಸ್ಯರ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿ ಪುನರ್ವಸತಿ ದೇಣಿಗೆ ಸಂಗ್ರಹಿಸಲು ತೆರೆಯಲಾಗುವ ಖಾತೆಯನ್ನು ಪಾರದರ್ಶಕವಾಗಿ ನಿರ್ವಹಿಸಿ ಎಂದರು.
ಬಾಲಕಾರ್ಮಿಕರನ್ನು ರಕ್ಷಣೆ ಮಾಡಿ ಪುನವರ್ಸತಿ ಕಲ್ಪಿಸುವ ಸಂದರ್ಭದಲ್ಲಿ ಅವರ ಪೆÇೀಷಕರ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡ ನಂತರ ಅವರ ಆರ್ಥಿಕ ಸ್ಥಿತಿಯಲ್ಲಿ ತೊಂದರೆಯಿದ್ದಲ್ಲಿ ಅವರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿದರು..
ಕಾರ್ಮಿಕ ಇಲಾಖೆ ಉಪ ಆಯುಕ್ತೆ ಲಲಿತಾ ಬಾಯ್ ಮಾತನಾಡಿ, 2025-26ನೇ ಸಾಲಿನಲ್ಲಿ ಏಪ್ರಿಲ್‍ನಿಂದ ಅಕ್ಟೋಬರ್ ಮಾಹೆಯವರೆಗೆ 742 ದಾಳಿ ನಡೆಸಲಾಗಿದ್ದು, 3 ಬಾಲ ಕಾರ್ಮಿಕರನ್ನು ಹಾಗೂ 17 ಕಿಶೋರ ಕಾರ್ಮಿಕರು ಒಟ್ಟು 20 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕಾರ್ಮಿಕ ಅಧಿಕಾರಿ ಚೇತನ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉದಯ್ ಕುಮಾರ್, ಮಡಿಲು ಸಂಸ್ಥೆಯ ಶ್ರೀನಿವಾಸ್ ಸೇರಿದಂತೆ ಇನ್ಬಿತರೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.












