ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯಾಗಿ ► ಆಶಾ ಲಕ್ಷ್ಮಣ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ದ.ಕ.ಜಿಲ್ಲಾ ಕಾಂಗ್ರೆಸ್ ಇದರ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ್ ರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇತರ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಪಿ.ಧರಣೇಂದ್ರ ಕುಮಾರ್ ರವರು ಆದೇಶಿಸಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ರಘು ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡರ ಶಿಫಾರಸ್ಸಿನ ಮೇರೆಗೆ ಆಶಾ ಲಕ್ಷ್ಮಣ್ ರನ್ನು ಜಿಲ್ಲಾ ಕಾಂಗ್ರೆಸ್ ಇದರ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದು ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇವರ ಪತಿ ಲಕ್ಷ್ಮಣ್ ರವರು ನಿವೃತ್ತ ಸೈನಿಕರಾಗಿದ್ದಾರೆ.

Also Read  ಹೆಚ್ಚಾಗಿ ಲವ್ ಮಾಡಿ ಮದುವೆ ಆಗುತ್ತಾರೆ ಈ 5 ರಾಶಿಯವರು!ನಿಜವಾದ ಪ್ರೀತಿ ಇವರಿಗೆ ಸಿಗುತ್ತದೆ. ನಿಮ್ಮ ರಾಶಿ ಇದ್ದೀಯ ತಿಳಿದುಕೊಳ್ಳಿ

error: Content is protected !!
Scroll to Top