ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ



(ನ್ಯೂಸ್ಕಡಬ) newskadaba.com,  .21: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6, 2026 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ.





19 ವರ್ಷದೊಳಗಿನವರ ಪುರುಷರ ಏಕದಿನ ವಿಶ್ವಕಪ್​ನಲ್ಲಿ 16 ತಂಡಗಳು ಕಣಕ್ಕಿಳಿಯಲಿದ್ದು, ಒಟ್ಟು 41 ಪಂದ್ಯಗಳು ನಡೆಯಲಿದೆ. ಭಾರತ ತಂಡವು ಮೊದಲ ಸುತ್ತಿನಲ್ಲಿ ಮೂರು ಎದುರಾಳಿಗಳನ್ನು ಎದುರಿಸಲಿದೆ.
ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಯುಎಸ್​ಎ ವಿರುದ್ಧ ಆಡಲಿದ್ದು, ಇದಾದ ಬಳಿಕ ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ತಂಡಗಳನ್ನು ಎದುರಿಸಲಿದೆ.






error: Content is protected !!
Scroll to Top