(ನ್ಯೂಸ್ ಕಡಬ) newskadaba.com, ನ.21: ರಾಜ್ಯದಲ್ಲಿ ಕೆಲದಿನಗಳಿಂದ ದುರ್ಬಲವಾಗಿದ್ದ ಈಶಾನ್ಯ ಮಾನ್ಸೂನ್ ಮತ್ತೆ ಚುರುಕು ಪಡೆಯುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಇಂದು (ನ.21) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ ಇರಲಿದ್ದು, ಕೆಲವೆಡೆ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.
ನ.22ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನ. 23ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.












