ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಚೆನ್ನೈ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವು



(ನ್ಯೂಸ್‌ ಕಡಬ) newskadaba.com,  ನ.24 ಕೋಲಾರ : ಚೆನ್ನೈ-ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.





ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವರ್ಣಾ ಕಾರು, ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದೆ. ವೇಗವಾಗಿದ್ದ ಕಾರು ಅಬ್ಬೇನಹಳ್ಳಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ.






​ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

error: Content is protected !!
Scroll to Top