ಇಂದಿನ ಹವಮಾನ ವರದಿ



(ನ್ಯೂಸ್ ಕಡಬ) newskadaba.com,  .29: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಒಣ ಹವೆ ಕಂಡುಬರುತ್ತಿದೆ. ಆದರೆ, ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ದಿತ್ವಾ ಚಂಡಮಾರುತ ಪರಿಣಾಮದಿಂದ ನ.29 ಮತ್ತು 30ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.





ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 16°C ಇರುವ ಸಾಧ್ಯತೆ ಇದೆ.






ಶ್ರೀಲಂಕಾದ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈರುತ್ಯ ಬಂಗಾಳ ಕೊಲ್ಲಿಯ ಮೇಲೆ ಬೀಸುತ್ತಿರುವ ಚಂಡಮಾರುತ ದಿತ್ವಾ ಚಂಡಮಾರುತ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಕೇಂದ್ರೀಕೃತವಾಗಿದೆ. ಇದು ಶ್ರೀಲಂಕಾ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈರುತ್ಯ ಬಂಗಾಳ ಕೊಲ್ಲಿಯ ಮೂಲಕ ಉತ್ತರ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ. ನವೆಂಬರ್ 30 ರ ಬೆಳಗ್ಗೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿ ನೈರುತ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

error: Content is protected !!
Scroll to Top