“ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ”: ಸಚಿವ ಸತೀಶ್ ಜಾರಕಿಹೊಳಿ



(ನ್ಯೂಸ್‌ ಕಡಬ) newskadaba.com,  ಡಿ.01 ಬೆಳಗಾವಿ :ಕಾಂಗ್ರೆಸ್ ಆಡಳಿತಾವಧಿಯಲ್ಲಿ ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಭೂಮಿ ಮಂಜೂರು ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.





ಹಲವು ಟೀಕೆಗಳ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಬಡವರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವ ಜೊತೆಗೆ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಿಎಂ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಪ್ರತಿ ವರ್ಷ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ನೀಡುತ್ತಿದೆ. ಅವುಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವಾಗಬೇಕು.






ರಾಜ್ಯ ಗ್ಯಾರಂಟಿ ಯೋಜನೆಗಳ‌ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ.ದೇವರಾಜ ಅರಸ, ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಸ್.ಎಂ.ಕೃಷ್ಣ ಅವರು ಜನಪರ ಯೋಜನೆ ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಮುನ್ನಡೆ ಬರೆದಿದ್ದರು.. ಅಲ್ಲದೆ, ಮಹಿಳಾ ಸಬಲಿಕರಣಕ್ಕೂ ವಿವಿಧ ಯೋಜನೆಗಳನ್ನು ರೂಪಿಸುವ ಮೂಲಕ ಕರ್ನಾಟಕ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದರು.

error: Content is protected !!
Scroll to Top