(ನ್ಯೂಸ್ ಕಡಬ) newskadaba.com, ಡಿ.01 : ದಿತ್ವಾ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ .
ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ








