ಇಂದಿನ ಹವಾಮಾನ ವರದಿ



(ನ್ಯೂಸ್ ಕಡಬ) newskadaba.com, ಡಿ.03 : ದಿತ್ವಾ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆಯಿದ್ದು, ಮೈ ಕೊರೆಯುವ ಚಳಿ ಇರಲಿದೆ.





ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.






ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!
Scroll to Top