(ನ್ಯೂಸ್ ಕಡಬ) newskadaba.com ಡಿ. 04. 2025-26ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25000 ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುತ್ತದೆ. ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೋರ್ಟಲ್ (https://sevasindhuservices.karnataka.gov.in) ಮುಖಾಂತರ ಡಿಸೆಂಬರ್ 31ರ ವರೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://dom.karnataka.gov.in (ಸಹಾಯವಾಣಿ: 8277799990) ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








