ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ಬಂಧನ – ಕೆಲಸದಿಂದ ಅಮಾನತು



(ನ್ಯೂಸ್ ಕಡಬ) newskadaba.com ಕಡಬ, ಡಿ.04. ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದಿದ್ದ ಕಡಬ ಠಾಣಾ ಹೆಡ್ ಕಾನ್ಸ್‌ಟೇಬಲ್ ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೋರ್ವರಿಗೆ ಹಲ್ಲೆ ಮಾಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರದಂದು ನಡೆದಿದೆ.





ಕಡಬ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಜು ನಾಯ್ಕ್ ಎಂಬಾತ ತಡರಾತ್ರಿ ವೇಳೆಗೆ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ. ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚೇತನ್ ಎಂಬವರಿಗೆ ಹಲ್ಲೆಗೈದಿದ್ದು, ಈ ಬಗ್ಗೆ ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






ಆರೋಪಿ ರಾಜು ನಾಯ್ಕ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

error: Content is protected !!
Scroll to Top