10th ಪಾಸಾದವರಿಗೆ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ



(ನ್ಯೂಸ್‌ ಕಡಬ) newskadaba.com,  ಡಿ.13 ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ 946 ಅಂಗನವಾಡಿ ಗೌರವಧನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಸಮಾಜದ ಕಲ್ಯಾಣಕ್ಕೆ ಮಹತ್ವದ ಪಾತ್ರ ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ತುಮಕೂರು ಜಿಲ್ಲೆಯಲ್ಲಿ ಸಿಹಿಸುದ್ದಿ ಪ್ರಕಟಗೊಂಡಿದೆ. ಮುಖ್ಯವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಒಟ್ಟು 946 ಗೌರವಧನ ಆಧಾರಿತ ಸೇವಾ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ





ಈ ನೇಮಕಾತಿಯಲ್ಲಿ 117 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಮತ್ತು 829 ಅಂಗನವಾಡಿ ಸಹಾಯಕಿಯರ ಗೌರವಧನದ ಹುದ್ದೆಗಳು ಸೇರಿವೆ. ಈ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ಮಾನದಂಡಗಳು, ಶೈಕ್ಷಣಿಕ ಹಿನ್ನೆಲೆ, ವಯೋಮಿತಿ ಮತ್ತು ಮೀಸಲಾತಿ ನಿಯಮಗಳನ್ನು ಆನ್‌ಲೈನ್ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ, ನಿಬಂಧನೆಗಳ ಪ್ರಕಾರ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಮಹಿಳೆಯರಿಗೆ ಉತ್ತಮ ಗೌರವಧನ ಸೇವಾ ಅವಕಾಶಗಳು ಲಭ್ಯವಾದಂತಾಗಿದೆ.






ಸೂಚನೆಗಳು:

  1. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್‌ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.
  2. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಮಾರ್ಗಸೂಚಿ/ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢಿಕೃತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸುವುದು ಹಾಗೂ ಡಿಜಿ ಲಾಕರ್ ಬಳಸಿ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
  3. ಆನ್‌ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ತದನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿಗೆ ದಿನಾಂಕ: 10-12-2025 ರಿಂದ 09-01-2026..

error: Content is protected !!
Scroll to Top