(ನ್ಯೂಸ್ ಕಡಬ) newskadaba.com,ಡಿ. 18: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು, ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳದಂತೆ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.












