ಮುಂದಿನ ಎರಡು ದಿನ ದಲ್ಲಿ ರಾಜ್ಯಾದ್ಯಂತ ಮುಂದುವರಿಯಲಿದೆ ಚಳಿ-ಬಿಸಿಲು



(ನ್ಯೂಸ್‌ ಕಡಬ) newskadaba.com,ಬೆಂಗಳೂರು, ಡಿ. 19: ರಾಜ್ಯದಲ್ಲಿ ಚಳಿಯ ತೀವ್ರತೆ ಮುಂದುವರಿದಿದ್ದು, ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ 14°C ಹಾಗೂ 28°C ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಮಳೆ ಸುರಿಯುವ ಸಾಧ್ಯತೆ ಇಲ್ಲ.





ಮುಂದಿನ 5 ದಿನಗಳವರೆಗೆ ಕರಾವಳಿಯಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಇನ್ನು ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ. ಗುರುವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಧಾರವಾಡದಲ್ಲಿ 10°C ದಾಖಲಾಗಿದೆ.






ಬೀದರ್‌, ಧಾರವಾಡ, ವಿಜಯಪುರ, ಗದಗ, ರಾಯಚೂರು ಮತ್ತು ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ದಾವಣಗೆರೆ ಮತ್ತು ಚಿಂತಾಮಣಿಯಲ್ಲಿ ಕನಿಷ್ಠ ತಾಪಮಾನ 10°C-15°C ವ್ಯಾಪ್ತಿಯಲ್ಲಿತ್ತು. ಆಗುಂಬೆ, ಬೆಂಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಒಳನಾಡಿನ ಶಿವಮೊಗ್ಗ, ಕರಾವಳಿಯಲ್ಲಿ 21°C-23°C ತಾಪಮಾನ ದಾಖಲಾಯಿತು. ಉತ್ತರ ಒಳನಾಡಿನ ಬೀದರ್‌ ಮತ್ತು ದಕ್ಷಿಣ ಒಳನಾಡಿನ ಹಾಸನದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 13ರಂದು ತಾಪಮಾನ ಕೇವಲ 7 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು. ಡಿ. 16ರಂದು ಕನಿಷ್ಠ 10.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಯಿತು. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳದಂತೆ ತಜ್ಞರು ಸಲಹೆ ನೀಡಿದ್ದಾರೆ.

error: Content is protected !!
Scroll to Top