ರಾಜ್ಯದಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ ► ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನೀರಿಲ್ಲದ ಮೀನಿನಂತೆ ಒದ್ದಾಡುತ್ತಿದ್ದು, ಮೇ 12 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಆಡಳಿತಕ್ಕೆ ಬರಲಿದೆ ಎಂದು ಪ್ರಚಾರ ಪಡಿಸಿ ಮತದಾರರನ್ನು ಅತಂತ್ರರನ್ನಾಗಿಸುವ ಪ್ರಯತ್ನ ನಡೆಯುತ್ತಿದ್ದು, ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರದ ಐದು ವರ್ಷದ ಆಡಳಿತಕ್ಕೆ ಬೇಸತ್ತು ಮತದಾರರು ಶಿಕ್ಷೆ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಯು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುವುದರೊಂದಿಗೆ ‘ಸುರಕ್ಷಿತ ಕರ್ನಾಟಕ ನಿರ್ಮಾಣ’ ಮಾಡಲಾಗುವುದು ಎಂದು ಹೇಳಿದ ಅವರು, ಕರ್ನಾಟಕದಲ್ಲಿ ಕಮಲವನ್ನು ಅರಳಿಸುವ ಮೂಲಕ ದಕ್ಷಿಣ ಭಾರತದಲ್ಲೂ ಬಿಜೆಪಿಯನ್ನು ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

Also Read  ಕಡಬದ ರಿಧಿ ಫ್ಯಾಷನ್‌ನಲ್ಲಿ ಕೃಷ್ಣಾಷ್ಟಮಿ ಮತ್ತು ಓಣಂ ಪ್ರಯುಕ್ತ ವಿಶೇಷ ಆಫರ್ ➤ 50% ವರೆಗೆ ದರಕಡಿತ ಮಾರಾಟ

error: Content is protected !!
Scroll to Top