ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ



(ನ್ಯೂಸ್‌ ಕಡಬ) newskadaba.com,ಡಿ.24: ಪ್ರಸಕ್ತ 2025-26 ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 360.01 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,200 ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿ ಆದೇಶಿಸಿದೆ.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಶಾಲಾವಾರು ಪಟ್ಟಿಯಂತೆ ಹಾಗೂ ಷರತ್ತು ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ನಿಗಧಿತ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಲಾಗಿದೆ.





ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಮೂಲಕ ವಲಯ ಮಟ್ಟದಲ್ಲಿ ಟೆಂಡರ್‌ ಕರೆಯಲು ಅವಕಾಶ ನೀಡುವುದು, ಬೆಂಗಳೂರು ಮತ್ತು ಮೈಸೂರು ವಿಭಾಗಗಳಲ್ಲಿ ಲೋಕೋಪಯೋಗಿ ಇಲಾಖೆಯ ಯೋಜನೆ ಮತ್ತು ರಸ್ತೆಗಳ ನಿರ್ವಹಣಾ ಕೇಂದ್ರಕ್ಕೆ ವಹಿಸಿ ಟೆಂಡರ್‌ ಕರೆಯಲು ಅವಕಾಶ ನೀಡುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.






ಜಿಲ್ಲಾಮಟ್ಟದಲ್ಲಿ ಜಿಲ್ಲಾಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಉಪನಿರ್ದೇಶಕರು ಕಾಮಗಾರಿಗಳ ಮೇಲ್ವಿಚಾರಣೆ ನಡೆಸಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮೂಲ ಸೌಕರ್ಯಕ್ಕೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನವನ್ನು ತ್ರೈಮಾಸಿಕವಾರು ಬಿಡುಗಡೆ ಮಾಡಲು ಆಯುಕ್ತರಿಗೆ ಅನುಮತಿ ನೀಡಲಾಗಿದೆ.

 

error: Content is protected !!
Scroll to Top