(ನ್ಯೂಸ್ ಕಡಬ) newskadaba.com,ಡಿ.29: ಉತ್ತರ ಭಾರತದಾದ್ಯಂತ ವಿಮಾನ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುವ ಮಂಜು ಮತ್ತು ಕಡಿಮೆ ಗೋಚರತೆಯ ಮಧ್ಯೆ ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣಿಕರ ಸೌಲಭ್ಯ ಮಾನದಂಡಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.
ಮಂಗಳವಾರ ದೆಹಲಿ ವಿಮಾನ ನಿಲ್ದಾಣದಲ್ಲಿ 118 ವಿಮಾನಗಳ ಸಂಚಾರ ರದ್ದಾದ ನಂತರ, 16 ವಿಮಾನಗಳ ಸಂಚಾರ ಮಾರ್ಗ ಬದಲಾವಣೆ ಮತ್ತು 130 ಸೇವೆಗಳ ಸಂಚಾರ ವಿಳಂಬವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ 60 ಆಗಮನ ಮತ್ತು 58 ನಿರ್ಗಮನಗಳನ್ನು ರದ್ದುಗೊಳಿಸಲಾಗಿದ್ದು, 16 ವಿಮಾನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆದಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ 1,300 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ದಟ್ಟ ಮಂಜು ಮತ್ತು ಕಡಿಮೆ ಗೋಚರತೆ ಕಾರಣ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವಿಮಾನಗಳ ಹಾರಾಟದ ಮಾಹಿತಿ ನೀಡುವ ‘ಫ್ಲೈಟ್ರಾಡಾರ್–24’ ವೆಬ್ಸೈಟ್ ವರದಿ ಮಾಡಿದೆ.








