(ನ್ಯೂಸ್ ಕಡಬ) newskadaba.com,ಡಿ.31: ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ನ ಗಾಂಧಿ ಹೆಸರು ತೆಗೆದು ಹಾಕುವ ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆ ಅನುಷ್ಠಾನಗೊಳಿಸದಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಹೊಸ ಕಾನೂನು ಮೂಲಭೂತವಾಗಿ ಉದ್ಯೋಗ ಖಾತರಿ ಚೌಕಟ್ಟನ್ನು ಮತ್ತು ಸಹಕಾರಿ ಒಕ್ಕೂಟವನ್ನು ದುರ್ಬಲಗೊಳಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಇಂದು ಮೋದಿ ಅವರಿಗೆ ಬರೆದ ವಿವರವಾದ ಪತ್ರದಲ್ಲಿ, ಮುಖ್ಯಮಂತ್ರಿಗಳು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ರದ್ದತಿಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹೊಸ ಕಾಯ್ದೆ ಗ್ರಾಮೀಣ ಕುಟುಂಬಗಳಿಗೆ ನಿರ್ಣಾಯಕ ಜೀವನೋಪಾಯದ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.








