(ನ್ಯೂಸ್ ಕಡಬ) newskadaba.com,ಜ.01 ಬೆಂಗಳೂರು: ಡಿಸೆಂಬರ್ ಕೊನೆ ವಾರದಲ್ಲಿ ಇಳಿಕೆಯಾದ ಚಿನ್ನದ ಬೆಲೆ, 2026 ರ ವರ್ಷಾರಂಭದಲ್ಲೇ ಇಂದು ಮತ್ತೆ ಹೆಚ್ಚಳ ಕಂಡಿದೆ.
ಶುದ್ಧ ಚಿನ್ನದ ಇಂದಿನ ದರ
ಜನವರಿ 1 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13,506 ರೂಪಾಯಿ ಇದ್ದು, ಇಂದು 17 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,060 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 170 ರೂಪಾಯಿ ಹೆಚ್ಚಳ ಆಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ
22 ಕ್ಯಾರೆಟ್ 1 ಗ್ರಾಂ ಬೆಲೆ 12,380 ರೂಪಾಯಿ ಇದ್ದು, ಇಂದು 15 ರೂ ಏರಿಕೆ ಆಗಿದೆ. 10 ಗ್ರಾಂ ಬೆಲೆ 1,23,800 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 150 ರೂ ಹೆಚ್ಚಳ ಆಗಿದೆ.ಬೆಂಗಳೂರಲ್ಲಿ
1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 13,506 ರೂಪಾಯಿ ಇದ್ದು, 10 ಗ್ರಾಂ ಶುದ್ಧ ಚಿನ್ನಕ್ಕೆ 1,35,060 ರೂಪಾಯಿ ಇದೆ. ಈ ಬೆಲೆಯಲ್ಲಿ ಜಿಎಸ್ಟಿ ಸೇರಿಲ್ಲ, ಹೀಗಾಗಿ ಮಳಿಗೆಗಳಲ್ಲಿ ವ್ಯತ್ಯಾಸ ಇರಲಿದೆ.
ಬೆಳ್ಳಿ ಬೆಲೆ ಇಂದು 1 ರೂಪಾಯಿ ಇಳಿಕೆಯಾಗಿದ್ದು, 238 ರೂ ಆಗಿದ್ದು, ಕೆಜಿಗೆ 2,38,000 ರೂ ಇದೆ.








