ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ ► ಫಲಿತಾಂಶ ಪಡೆಯಲು ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.07. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು, ಉಡುಪಿ ಪ್ರಥಮ ಮತ್ತು ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.

ಉತ್ತರ ಕನ್ನಡ ದ್ವಿತೀಯ ಹಾಗೂ ಚಿಕ್ಕೋಡಿ ತೃತೀಯ ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಈ ಬಾರಿ 71.93ರಷ್ಟು ಉತ್ತೀರ್ಣರಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚಿನ ಸಾಧನೆಯನ್ನು ಮಾಡಿದ್ದಾರೆ. ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಿದ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಶೇ 4ರಷ್ಟು ಹೆಚ್ಚಳವಾಗಿದೆ ಎಂದರು. ಫಲಿತಾಂಶ ಪಡೆಯಲು http://sslc.kar.nic.in ಅಥವಾ http://karresults.nic.in ನ್ನು ಕ್ಲಿಕ್ ಮಾಡಿ.

Also Read  ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು!

error: Content is protected !!
Scroll to Top