(ನ್ಯೂಸ್ ಕಡಬ) newskadaba.com,ಜ.05: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ 15 ಇನ್‌ಸ್ಟಾಗ್ರಾಂ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.”ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ” ಎಂದು ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಪ್ರಶ್ನಿಸಿದ್ದರು.ವಿಜಯಲಕ್ಷ್ಮಿ ಅವರು ಈ ಹೇಳಿಕೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ಅವರು ದೂರು ನೀಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಜಯಲಕ್ಷ್ಮೀ ದೂರು ದಾಖಲಿಸಿದ್ದಾರೆ. ತಮಗೆ ಬಂದ ಹೇಟ್ ಕಮೆಂಟ್? ಸ್ಕ್ರೀನ್‌ಶಾಟ್ ಹಾಗೂ ಆಯಾ ಖಾತೆಗಳ ವಿವರಗಳನ್ನು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಸೈಬರ್ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.ಮಕ್ಕಳ ವರ್ತನೆಗಳನ್ನು ಬದಲಾಯಿಸಿ ಉತ್ತಮ ಶಿಕ್ಷಣ ನೀಡುವುದು ಜವಾಬ್ದಾರಿಯುತ ಪೋಷಕರ ಹಾಗೂ ಶಿಕ್ಷಕರ ಕರ್ತವ್ಯ. ವಿದ್ಯಾರ್ಥಿಗಳು ತನ್ನ ಹೆತ್ತವರ ಹಾಗೂ ಗುರುಹಿರಿಯರ ಆದರ್ಶಗಳನ್ನು ಪಾಲಿಸಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಕೌನ್ಸಿಲಿಂಗ್ ತಜ್ಞ, ಮನೋವಿಶ್ಲೇಷಕ ಅನ್ಸರ್ ಮುಡಿಪು ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆದ ಹದಿಹರೆಯದವರ ಸಬಲೀಕರಣ ಮತ್ತು ಪೋಷಕರ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತರಬೇತಿ ನೀಡಿದರು.
ಪ್ರಸ್ತುತ ವಿದ್ಯಾರ್ಥಿಗಳಿಗೆ ಹೊಟ್ಟೆಯ ಹಸಿವಿಗಿಂತ ಜ್ಞಾನದ ಹಸಿವಿನ ಕೊರತೆ ಇದೆ. ಇದನ್ನು ನೀಗಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿರುವ ಶಿಕ್ಷಕರನ್ನು ವಿದ್ಯಾರ್ಥಿಗಳು ಯಾವತ್ತೂ ಮರೆಯಬಾರದು ಎಂದು ಅನ್ಸರ್ ಹೇಳಿದರು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರುಗಳಾದ ಲೋಕೇಶ್ ಮಠತ್ತಡ್ಕ, ವಿಜಿತಾ, ಗೀತಾ ಬಾಲಚಂದ್ರ, ರಶ್ಮಿ, ಸಿಂಚನಾ ಕೆ ಪಿ, ಯಶಸ್ವಿನಿ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ತಳೂರು ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿಭಾಗದ ವಿದ್ಯಾರ್ಥಿಗಳು ಹಾಗೂ ಹೆತ್ತವರು ತರಬೇತಿಯಲ್ಲಿ ಭಾಗವಹಿಸಿದರು.








