(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.07. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು 625 ರಲ್ಲಿ 623 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದಿರುವ ಹನ್ನೆರಡು ವಿದ್ಯಾರ್ಥಿಗಳ ಪೈಕಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿನಿ, ಮಾಜಿ ಪ್ರಾಂಶುಪಾಲ ಹಾಗೂ ಪತ್ರಕರ್ತ ದಿ| ವಿಠಲ ರಾವ್ ಅವರ ಪುತ್ರಿ ಅಭಿಜ್ಞಾ ರಾವ್ 623 ಅಂಕಗಳನ್ನು ಗಳಿಸಿದ್ದಾರೆ. ಕಳೆದ ಸಾಲಿನಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಪ್ರೌಢ ಶಾಲೆಯ ವಿದ್ಯಾರ್ಥಿ ಪೂರ್ಣಾನಂದ ಎಚ್. ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದರು.