(ನ್ಯೂಸ್ ಕಡಬ) newskadaba.com,ಜ.17: ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.








