(ನ್ಯೂಸ್ ಕಡಬ) newskadaba.com,ಜ.20 ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಾಲೆಗಳಿಂದ ಮಾಹಿತಿ ಸಂಗ್ರಹಿಸುತ್ತಿದೆ.
ಈ ಕುರಿತು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದ್ದು, 1ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳ ಡೇಟಾವನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ನಿರ್ದೇಶನ ನೀಡಿದೆ.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ತಲಾ ಒಂದು ಜತೆ ಶೂ, ಎರಡು ಜತೆ ಸಾಕ್ಸ್ ವಿತರಿಸಲಿದೆ. ಆದರೆ ಈ ಬಾರಿ ಶೂ ಬದಲಿಗೆ ಚಪ್ಪಲಿ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.








