ಸರ್ಕಾರಿ ಕಚೇರಿ. ಖಾಸಗಿ ಸಂಸ್ಥೆಗಳಿಗೆ ಅಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ



(ನ್ಯೂಸ್‌ ಕಡಬ) newskadaba.com,ಜ.21 ಕಲಬುರಗಿ:  ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ನಿಷೇಧಿಸುವಿಕೆ, ನಿವಾರಣೆ 2013 ರ ಕಾಯ್ದೆ ಅನ್ವಯ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುವ ಸರ್ಕಾರಿ ಕಚೇರಿಗಳಾಗಲಿ ಖಾಸಗಿ ಸಂಸ್ಥೆಗಳಿಗೆ ಆಂತರಿಕ ದೂರು ನಿವಾರಣಾ ಸಮಿತಿಯ ರಚನೆ ಕಡ್ಡಾಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸದಸ್ಯ ಕಾರ್ಯದರ್ಶಿಗಳು ಶ್ರೀನಿವಾಸ ನವಲೆ ಅವರು ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇೀಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಸಬಲೀಕರಣ ಘಟಕ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ಹಾಗೂ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005″ ನಿಯಮ 2006 ಅನುಷ್ಠಾನ ಕುರಿತು ಸಂರಕ್ಷಣಾಧಿಕಾರಿಗಳು ಮತ್ತು ಭಾಗೀದಾರ ಇಲಾಖೆಗಳ ಅಧಿಕಾರಿಗಳಿಗೆ ಎರಡು ದಿನದ ಓರಿಯೆಂಟೇಷನ್ ತರಬೇತಿ ಕಾರ್ಯಾಗಾರ ಉದ್ಫಾಟಿಸಿ ಮಾತನಾಡಿದರು.
ಸರ್ಕಾರ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ನ್ಯಾಯಾದೊರಕಿಸಿಕೊಟ್ಟಿದೆ ಮಹಿಳೆಯರು ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರು ಸಂರಕ್ಷಣಾ ಕಾಯೆಯ (2005) ಅಡಿಯದಲ್ಲಿ ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಒದಗಿಸಬಹುದು. ಪೋಲಿಸ್ ಇಲಾಖೆಯ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬಬೇಕು ಎಂದರು.
ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಮಾತನಾಡಿ. ಕಾನೂನುಗಳು ಬಹಳಷ್ಟಿದೆ, ಪ್ರಚಾರಗಳು ಬಹಳಷ್ಟು ಆದರೂ ಕೂಡ ಕಾನೂನಿನ ಉಲ್ಲಂಘನೆ ಆಗುತ್ತಿದೆ ಎಂದರೆ ಸಮಾಜಕ್ಕೆ ಒಂದು ಸವಾಲಾಗಿ ಪರಿಣಮಿಸಿದೆ ಎಂದರು.
ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005 ಅಡಿಯಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿ ಮಾಡಲು ಸಂಬಂಧಪಟ್ಟ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕು. ಸೆಕ್ಷನ್ 12 ಮತ್ತು ಸೆಕ್ಷನ್ 18 , 19 ಅಥವಾ 20 ರ ಅಡಿಯಲ್ಲಿ ಬಾಧಿತ ವ್ಯಕ್ತಿಗಳು ಸಲ್ಲಿಸಿದ ಅರ್ಜಿಗಳನ್ನು 60 ದಿನಗಳ ಒಳಗೆ ನ್ಯಾಯಾಧೀಶರು ನಿರ್ಧರಿಸುತ್ತಾರೆ ಎಂದರು.





error: Content is protected !!
Scroll to Top