• ಕರ್ನಾಟಕ ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗಲು ಮುಂದಾದ ರಾಜ್ಯಸರ್ಕಾರ..!



(ನ್ಯೂಸ್ಕಡಬ) newskadaba.com,.22  ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ರಾಜ್ಯ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭಾಷಣವನ್ನು ಓದಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಗೆ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.





ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವದೆಹಲಿಗೆ ತೆರಳಿದ್ದಾರೆ.ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆ ಮೂಲಕ ರಾಜ್ಯಪಾಲರಿಗೆ ನಿರ್ದೇಶನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.ಈಗ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಿರುವ ಸಂಭಾವ್ಯ ಅರ್ಜಿಯಲ್ಲಿ ಎರಡು ಪ್ರಮುಖ ಅಂಶಗಳ ಮೇಲೆ ರಾಜ್ಯಪಾಲರಿಗೆ ನಿರ್ದೇಶನ ನೀಡಲು ಸರ್ಕಾರ ಕೋರಲಿದೆ. ಅದರಲ್ಲಿ ಮೊದಲನೆಯದಾಗಿ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಸದನದಲ್ಲಿ ಓದಬೇಕು. ಇನ್ನೂ ಎರಡನೇಯದಾಗಿ ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಪಾಲಿಸಬೇಕು ಎಂದು ಮನವಿ ಮಾಡಲಿದ್ದಾರೆ.ಈ ಕುರಿತು ಅರ್ಜಿ ಸಿದ್ಧಪಡಿಸಲು ಮುಖ್ಯಮಂತ್ರಿಗಳು ಪೊನ್ನಣ್ಣ ಮತ್ತು ಅಡ್ವೊಕೇಟ್ ಜನರಲ್ ಅವರಿಗೆ ಜವಾಬ್ದಾರಿಯನ್ನು ವಹಿಸಿದ್ದಾರೆ ಎಂದು ತಿಳಿದುಬಂದಿದೆ.






error: Content is protected !!
Scroll to Top