(ನ್ಯೂಸ್ ಕಡಬ) newskadaba.com,ಜ,23 ಯಾದಗಿರಿ : ಅಕ್ಷರ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲೇ ಅಕಾಲಿಕ ಮರಣಕ್ಕೀಡಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಿಕ್ಷಕರ ನಿಂದನೆಯೇ ಬಾಲಕನ ಈ ನಿರ್ಧಾರಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
. ಈತ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಜನವರಿ 21ರಂದು ಮಧ್ಯಾಹ್ನದ ವೇಳೆಗೆ ಶಾಲಾ ಆವರಣದಲ್ಲಿರುವ ಮರದ ಕೆಳಗೆ ಶವ ಪತ್ತೆಯಾಗಿದೆ. ಮರಕ್ಕೆ ಕಟ್ಟಿದ್ದ ಹಗ್ಗಕ್ಕೆ ಬಾಲಕ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಸ್ವಯಂ ಪ್ರೇರಿತ ಸಾವು ಎನ್ನಲಾಗುತ್ತಿದೆ.
ಶಾಲಾ ಆವರಣದಲ್ಲೇ ಇಂತಹ ಘಟನೆ ನಡೆದಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಶಿಕ್ಷಕರ ನಡೆ ಮತ್ತು ಶಾಲಾ ಶಿಸ್ತಿನ ಹೆಸರಿನಲ್ಲಿ ನಡೆಯುವ ನಿಂದನೆಗಳ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಸ್ತುತ ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಲಿದೆ.












