ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ



 

(ನ್ಯೂಸ್ಕಡಬ) newskadaba.com,.28  ಮುಂಬೈ:  ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ  ವಿಮಾನ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.ಫ್ಲೈಟ್‌ರಾಡರ್‌ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್‌ಜೆಟ್ 45 (ವಿಟಿ-ಎಸ್‌ಎಸ್‌ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್‌ ಆಗಿತ್ತು





.ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲು ಪೈಲಟ್‌ ಪ್ರಯತ್ನಿಸಿದ್ದಾರೆ.ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ 2ನೇ ಬಾರಿ ವಿಮಾನ ಲ್ಯಾಂಡಿಂಗ್‌ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು ಪ್ರಯತ್ನಿಸಿದ್ದಾರೆ. ಆದರೆ ಈ ಪ್ರಯತ್ನ ವಿಫಲವಾಗಿ ವಿಮಾನ ಪತನಗೊಂಡಿದೆ.






.ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

error: Content is protected !!
Scroll to Top