(ನ್ಯೂಸ್ ಕಡಬ) newskadaba.com,ಫ್ರೆ,02: ರಾಜ್ಯದ ಹವಾಮಾನದಲ್ಲಿ ಏರುಪೇರಾಗುತ್ತಿದ್ದು, ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಒಣ ಹವೆ ಮುಂದುವರಿಯಲಿದ್ದು, ಬೆಳಗಿವ ಜಾವ ಚಳಿ ಹಾಗೂ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.








